Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇರಾ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಕಳ್ಳತನ ; ಸು.4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ್ದಾರೆ.

ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂದಿನ ಬಾಗಿಲನ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರ ಒಳಗೆ ಹೋಗಿ ನೋಡಿದಾಗ ಕೋಣೆಯಲ್ಲಿದ್ದ ಕಪಾಟಿನಲ್ಲಿ ತಡಕಾಡಿ ಬಟ್ಟೆಗಳನ್ನು ಚಲಾಪಿಲ್ಲಿ ಮಾಡಿ ಚಿನ್ನಾಭರಣ ದೋಚಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್‍ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.