Sunday, January 19, 2025
ದಕ್ಷಿಣ ಕನ್ನಡ

ಜು.18ರಂದು ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿಗೆ ರಜೆ ಘೋಷಣೆ ; ನಕಲಿ ರಜೆ ಆದೇಶ ವೈರಲ್ – ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದ್ದು ಅದನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರ ಸಹಿ ಇರುವ ನಕಲಿ ರಜೆಯ ಆದೇಶ ಪ್ರತಿ ಹಂಚುವವರ ವಿರುದ್ಧ ಶಿಸ್ತುಕ್ರಮಕ್ಕೆ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ.

ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ, ಸುಳ್ಯ, ಪುತ್ತೂರು,ಬೆಳ್ತಂಗಡಿ, ಕಡಬ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ