Thursday, November 21, 2024
ಉಡುಪಿಬೈಂದೂರುಸುದ್ದಿ

ಬೈಂದೂರು: ಸೋಮೇಶ್ವರ ಭಾಗದಲ್ಲಿ ಗುಡ್ಡ ಕುಸಿದರೆ ಅಧಿಕಾರಿಗಳೇ ನೇರಹೊಣೆ: ಗುರುರಾಜ್ ಗಂಟೆ ಹೊಳೆ -ಕಹಳೆ ನ್ಯೂಸ್

ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬAಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.

ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಹೀಗಾಗುತ್ತಿದೆ. ಎಂದು ಶಾಸಕ ಗುರುರಾಜ್ ಗಂಟೆ ಹೊಳೆ ಯವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
ಗುಡ್ಡ ಜರಿದು ರಸ್ತೆ ಬ್ಲಾಕ್ ಆಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಈ ಹಿಂದೆಯೇ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ ಕಾಮಗಾರಿಗೆ ಸಂಬAಧಪಟ್ಟವರು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು ಎಂದು ಶಾಸಕರು ಎಚ್ಚರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು ಹಲವೆಡೆ ಮಳೆ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಾಗುವ ಒತ್ತಿನೆಣೆಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ದೊಂಬೆ ರಸ್ತೆಯನ್ನು ಅಧಿಕಾರಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿವುದು ಯಾಕೆ ಎಂದು ಶಾಸಕರು ಪ್ರಶ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು