Thursday, November 14, 2024
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಕರುನಾಡಿನಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಅಲ್ಲದೇ ಮಹಾಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಜುಲೈ 19 ರಿಂದ 22 ರವರೆಗೆ ಜೋರಾದ ಗಾಳಿಯೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಜುಲೈ 18 ರಿಂದ 22 ರವರೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇಆಗುಂಬೆ, ಭಾಗಮಂಡಲ, ಶೃಂಗೇರಿ, ಕೊಟ್ಟಿಗೆಹಾರ, ಕಮ್ಮರಡಿ, ಜಯಪುರ, ಕ್ಯಾಸಲ್​ರಾಕ್, ಗೇರುಸೊಪ್ಪ, ಸಿದ್ದಾಪುರ, ಕಳಸ, ಲಿಂಗನಮಕ್ಕಿ, ಕೊಪ್ಪ, ಸೋಮವಾರಪೇಟೆ, ಮಂಕಿ, ಹೊನ್ನಾವರ, ಕೋಟ, ಗೋಕರ್ಣ, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳದಲ್ಲೂ ಮಳೆಯಾಗಲಿದೆ.

ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಂತೆ ಜುಲೈ 18 ಮತ್ತು 19 ರಂದು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬುಧವಾರದಂದು. ಜಿಲ್ಲೆಗಳಲ್ಲಿ ದಿನವಿಡೀ ನಿರಂತರ ಮಳೆಯಾಗಿದೆ. ಇನ್ನೆರಡು ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಸಿದ್ದಾಪುರ, ಧರ್ಮಸ್ಥಳ, ಸುಳ್ಯ, ಕಾರವಾರ, ಯಲ್ಲಾಪುರ, ಬೆಳ್ತಂಗಡಿ, ಮಾಣಿ, ಮೂಡಿಗೆರೆ, ಜೋಯ್ಡಾ, ಉಪ್ಪಿನಂಗಡಿ, ಮಂಗಳೂರು ವಿಮಾನ ನಿಲ್ದಾಣ, ತ್ಯಾಗರ್ತಿ, ಪುತ್ತೂರು, ಬನವಾಸಿ, ಕಿರವತ್ತಿ, ಬೇಲೂರು, ಭದ್ರಾವತಿ, ಹಾಸನ, ಬಂಡೀಪುರ, ಎಚ್​ಡಿ ಕೋಟೆ, ಮುಲ್ಕಿ, ತರೀಕೆರೆ, ಆನವಟ್ಟಿ, ಹಾರಂಗಿ, ಕುಶಾಲನಗರ, ಚನ್ನಗಿರಿ, ಶಿವಮೊಗ್ಗ, ಚಿತ್ರದುರ್ಗ, ಹೊನ್ನಾಳಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ.