Sunday, March 30, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಂಜಾಲಕಟ್ಟೆ ಮಂದಿರದ ಬಳಿಯ ತಿರುವಿನಲ್ಲಿ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಪಲ್ಟಿ : ಒರ್ವ ಮೃತ್ಯು,ಇಬ್ಬರ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಸಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ. ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪುಂಜಾಲಕಟ್ಟೆ ಪೆÇೀಲೀಸರು ಸ್ಥಳದಲ್ಲಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ