Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜು.20ರಂದು (ನಾಳೆ) ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಬಲ್ನಾಡು ಇದರ ನೂತನ ಕೇಂದ್ರ ಕಛೇರಿ ಕಟ್ಟಡ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಬಲ್ನಾಡು ಇದರ ನೂತನ ಕೇಂದ್ರ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭವು ಜು.20ರಂದು ನಡೆಯಲಿದೆ.

ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಅಧ್ಯಕ್ಷ ವಿ. ಸತೀಶ್ ಗೌಡ ಒಳಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ ಅಧ್ಯಕ್ಷ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ನೂತನ ಕೇಂದ್ರ ಕಚೇರಿ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಆಡಳಿತ ಕಚೇರಿಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದು, ಭದ್ರತಾ ಕೊಠಡಿಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಅವರು ಸಭಾ ಭವನ ಉದ್ಘಾಟಿಸಲಿದ್ದು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಇದರ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ನೂತನ ಗೋದಾಮು ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಇದರ ನಿರ್ದೇಶಕಎಸ್.ಬಿ. ಜಯರಾಮ್ ರೈ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಇದರ ಯುನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ. ತಿಮ್ಮಪ್ಪ ಶೆಟ್ಟಿ ಚನಿಲ, ಬಲ್ನಾಡು ಹಾಲು ಉತ್ಪಾದಕರ ಸಹಕಾರ ಸಂಘ ಬೆಳಿಯೂರು ಕಟ್ಟೆ ಇದರ ಅಧ್ಯಕ್ಷ ಎ.ಎಂ. ಪ್ರವೀಣ್ ಚಂದ್ರ ಆಳ್ವ ಮುಂಡೇಲು, ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಬಿ.ಆರ್. , ಬಲ್ನಾಡು ನಗರಸಭಾ ಸದಸ್ಯೆ ಶ್ರೀಮತಿ ಪೂರ್ಣಿಮ ಚೆನ್ನಪ್ಪ ಗೌಡ, ದ.ಕ.ಜಿಲ್ಲಾ ಮಾನ್ಯ ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶ್ರೀಮತಿ ತ್ರಿವೇಣಿ ರಾವ್ ಭಾಗವಹಿಸಲಿದ್ದಾರೆ.