Recent Posts

Friday, November 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸರ್ವೆ ಸೇತುವೆ ಸಮೀಪ ವಾಹನ ನಿಲ್ಲಿಸಿ ಯುವಕ ನಾಪತ್ತೆ ಪ್ರಕರಣ : ಮೃತದೇಹ ಪತ್ತೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುತ್ತಿದ್ದ ಗೌರಿ ಹೊಳೆಯ ಅನತಿ ದೂರದಲ್ಲಿ ಬೈಕ್‌ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ, ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡರವರ ಪುತ್ರ ಸನ್ಮಿತ್ (21) ಮೃತಪಟ್ಟವರು.

ಇವರು ಜುಲೇ 19ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಬಳಿಕ ತಡ ರಾತ್ರಿ ಹುಡುಕಾಟ ನಡೆಸಿದಾಗ, ಗೌರಿ ಹೊಳೆ ಸೇತುವೆ ಬಳಿ ಸನ್ಮಿತ್‌ ರವರ ಡಿಯೋ ಸ್ಕೂಟರ್ ಹಾಗೂ ಮೊಬೈಲ್ ಫೋನ್, ಪರ್ಸ್, ಹೆಲ್ಮೆಟ್, ಟಿಫಿನ್ ಬಾಕ್ಸ್ ಪತ್ತೆಯಾಗಿತ್ತು. ಈ ಎಲ್ಲ ವಸ್ತುಗಳು ಪತ್ತೆಯಾದ ಗೌರಿ ಹೊಳೆ ಸೇತುವೆ ಬಳಿಯೇ ಮೃತದೇಹ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಬೆಳಿಗ್ಗಿನಿಂದಲೇ ಅಗ್ನಿ ಶಾಮಕದಳದವರು ಹಾಗೂ ಸ್ಥಳೀಯ ಪೊಲೀಸರು ಹುಡುಕಾಟ ನಡೆಸಿದ್ದರು. ಗೌರಿ ಹೊಳೆಯು ಅಂತಿಮವಾಗಿ ಕುಮಾರಧಾರ ನದಿಗೆ ಸೇರುವುದರಿಂದ ಆ ನದಿಯಲ್ಲೂ ಹುಡುಕಾಟ ನಡೆಸಿದ್ದರು, ಇಂದು ಬೆಳಿಗ್ಗೆ ಮತ್ತೆ ಶೋಧ ಕಾರ್ಯಚರಣೆ ಮುಂದುವರಿದಿದ್ದು, ಮಧ್ಯಾಹ್ನದ ವೇಳೆಗೆ ಮೃತದೇಹ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೇಲ್ನೋಟಕ್ಕೆ ಸನ್ಮಿತ್‌ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಆದರೇ ಯುವಕನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವುದೇ ಕಾರಣ ಗಳು ಇರಲಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಸಂಪ್ಯ ಠಾಣೆ ಪೊಲೀಸರು ಸನ್ಮಿತ್‌ ಮೊಬೈಲ್‌ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಪೊಲೀಸ್‌ ತನಿಖೆಯಿಂದ ಸ್ಪಷ್ಟ ಕಾರಣ ತಿಳಿದು ಬರಬೇಕಿದೆ

ಸನ್ಮಿತ್‌ ಶುಕ್ರವಾರ ಬೆಳಿಗ್ಗೆ ಉದ್ಯೋಗದ ಸ್ಥಳಕ್ಕೆ ಹಾಜರಾಗಿದ್ದರು. ಪ್ರತಿದಿನ ಸಂಜೆ 6.30ರ ವೇಳೆಗೆ ಮಗ ಮನೆಗೆ ಬರುತ್ತಿದ್ದ. ಆದರೇ ನಿನ್ನೆ ಕರೆಮಾಡಿ ಮನೆ ತಲುಪುವಾಗ ರಾತ್ರಿ 10 ಗಂಟೆಯಾಗಬಹುದೆಂದು ಸನ್ಮತ್ ತಂದೆ ಚಂದ್ರ ಗೌಡ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೇ ರಾತ್ರಿ 9.30ರ ವರೆಗೂ ಮಗ ಮನೆಗೆ ಬಾರದಿದ್ದಾಗ ತಂದೆ ಖುದ್ದಾಗಿ ಸನ್ಮತ್ ಗೆ ಕರೆಮಾಡಿ ವಿಚಾರಿಸಿದ್ದು ಇನ್ನರ್ಧ ಗಂಟೆಯಲ್ಲಿ ಮನೆ ತಲುಪುವುದಾಗಿ ಹೇಳಿದ್ದ. ರಾತ್ರಿ 11 ಗಂಟೆಯಾದರೂ ಮಗ ಮನೆಗೆ ಬಾರದಿದ್ದಾಗ ಮತ್ತೆ ಸನ್ಮತ್ ಮೊಬೈಲ್ ಗೆ ಕರೆ ಮಾಡಿದ್ದು, ಕರೆ ಸ್ವೀಕರಿಸುತ್ತಿರಲಿಲ್ಲ ಎಂದು ಶನಿವಾರ ಸನ್ಮಿತ್‌ ತಂದೆ ತಿಳಿಸಿದ್ದರು

ರಾತ್ರಿ 1 ಗಂಟೆಯವರೆಗೂ ಮಗ ಬಾರದಿದ್ದಾಗ ಪರಿಚಯದವರೊಂದಿಗೆ ಕಾರಿನಲ್ಲಿ ಮಗನನ್ನು ಹುಡುಕುತ್ತಾ ಬಂದಿದ್ದಾರೆ. ಈ ವೇಳೆ ಸರ್ವೆ ಹೊಳೆ ಬಳಿ ಮಗನ ಸ್ಕೂಟರ್ ಕಂಡು ಸಂಶಯಗೊಂಡ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಸ್ಕೂಟರ್ ಮತ್ತು ಅದರಲ್ಲಿದ್ದ ವಸ್ತುಗಳು ಸನ್ಮತ್ ಗೆ ಸೇರಿದ್ದೆಂದು ಖಚಿತವಾಗಿದೆ.