Saturday, September 21, 2024
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುಸುದ್ದಿ

ರಾಜ್ಯದಲ್ಲಿ ಇನ್ನೂ 6 ದಿನ ಮುಂದುವರಿಯಲಿದೆ ಮಳೆಯ ಆರ್ಭಟ ; ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 6 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ (Bengaluru) ಇನ್ನೂ 4 ದಿನ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು