Monday, January 20, 2025
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ.

ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು. ಈ ಸಂದರ್ಭದಲ್ಲಿ ತಾವು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಡಿ.ಕೆ.ಶಿವಕುಮಾರ್ ದರ್ಶನ್ ಅಭಿಮಾನಿಗಳಿಗೆ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಬಂದಿದ್ದಾರೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು