Sunday, January 19, 2025
ಬೆಂಗಳೂರುಸಿನಿಮಾಸುದ್ದಿ

ನಟಿ ಪ್ರಣಿತಾ ಸುಭಾಷ್ ಮತ್ತೆ ಪ್ರೆಗ್ನೆಂಟ್ ; ಗುಡ್ ನ್ಯೂಸ್ ಹಂಚಿಕೊಂಡ ನಟಿ – ಕಹಳೆ ನ್ಯೂಸ್

ಹುಭಾಷಾ ನಟಿ ಪ್ರಣಿತಾ ಸುಭಾಷ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ಫೋಟೋಶೂಟ್‌ವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಪ್ರೆಗ್ನೆನ್ಸಿ ಸುದ್ದಿಯನ್ನು ತಿಳಿಸಿದ್ದಾರೆ.

ಕನ್ನಡದ ‘ಪೊರ್ಕಿ’ (Porki) ನಟಿ ಪ್ರಣಿತಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ. ರೌಂಡ್ 2 ಪ್ಯಾಂಟ್‌ಗಳು ಇನ್ನೂ ಮುಂದೆ ಹೊಂದಿಕೆಯಾಗುವುದಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರೆಗ್ನೆನ್ಸಿ ವಿಷಯ ತಿಳಿಸಿದ್ದಾರೆ. ನಟಿಯ ಪೋಸ್ಟ್‌ಗೆ ಬಗೆ ಬಗೆ ಕಾಮೆಂಟ್‌ಗಳು ಹರಿದು ಬರುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಅಂದಹಾಗೆ, ಲಾಕ್‌ಡೌನ್ ವೇಳೆ 2021ರಲ್ಲಿ ಉದ್ಯಮಿ ನಿತಿನ್ ರಾಜು (Nithin) ಜೊತೆ ಪ್ರಣಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 2022ರ ಜೂನ್‌ನಲ್ಲಿ ಹೆಣ್ಣು ಮಗವಿಗೆ ನಟಿ ಜನ್ಮ ನೀಡಿದ್ದಾರೆ. ಈಗ 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ.

ಇನ್ನೂ ಕಡೆಯದಾಗಿ ಕನ್ನಡದ ‘ರಾಮನ ಅವತಾರ’ ಎಂಬ ಸಿನಿಮಾದಲ್ಲಿ ಪ್ರಣಿತಾ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.