ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ )ಬಂಟ್ವಾಳ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ. ಸರಕಾರಿ ಪದವಿ ಪೂರ್ವ ಕಾಲೇಜು ಬಿ ಮೂಡ ಇವುಗಳ ಸoಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅನುಷ್ಠಾನ ಮಾಡಿಕೊಡುವಂತೆ. ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜಗದೀಶ್ ನೆಲ್ಲಿಕಟ್ಟೆ ನಗರ ಸಭೆಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಜನಜಾಗ್ರತಿವೇದಿಕೆಯ ಸದಸ್ಯರ ಮಾತಾಡಿ ನಮ್ಮ ಜೀವನದಲ್ಲಿಗುರಿ ಇಟ್ಟುಕೊಂಡಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ ಹಾಗೂ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಅಮೂಲ್ಯ ಸಮಯವನ್ನು ಗುರಿಯ ಕಡೆಗೆ ಹೆಚ್ಚಿನ ಗಮನ ಹರಿಸಿ ಉತ್ತಮ ಸಾಧನೆ ಮಾಡಿ ಶಾಲೆ ಹಾಗೂ ಊರಿಗೆ ಒಳ್ಳೆಯ ಹೆಸರು ತರುವಂತೆ ದುಶ್ಚಟದಿಂದ ಆಗುವ ತೊಂದರೆ ಹಾಗೂ ಇದನ್ನು ಬಗೆಹರಿಸುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕರಾದ ದಾಮೋದರ ವಹಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರೋನಾಲ್ಡ್ ಡಿಸೋಜ. ಗ್ರಾಮಭಿವೃದ್ಧಿ ಯೋಜನೆಯ ತಾಲೂಕ್ ಯೋಜನಾಧಿಕಾರಿ ಬಾಲಕೃಷ್ಣ, ಒಕ್ಕೂಟದ ಅಧ್ಯಕ್ಷರಾದ ವಸಂತಿ ಗಂಗಾಧರ್, ಜನಜಾಗೃತಿ ಸದಸ್ಯರಾದ ಡಾಕ್ಟರ್ ಜಗದೀಶ್ ಭಟ್ ಉಪಸ್ಥಿತರಿದ್ದರು.
ಪ್ರಿಯಾಂಕ ಎಸ್ ಅಮೀನ್ ಹಾಗೂ ಬಳಗದವರು ಪ್ರಾರ್ಥಿಸಿ, ಸೇವಾಪ್ರತಿನಿಧಿ ಸುಲೋಚನಾ ಸ್ವಾಗತಿಸಿ . ಏನ್ ಏನ್ ಎಸ್ ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್ ವಂದಿಸಿ,ವಲಯ ಮೇಲ್ವಿಚಾರಕರಾಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.