ಕನ್ನಡ ಬಿಗ್ ಬಾಸ್ ಕನ್ನಡ ಸೀಸನ್ 11 : ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ನಟಿ ಮೋಕ್ಷಿತಾ ಪೈ ಹೋಗ್ತಾರಾ? ನಟಿ ಹೇಳಿದ್ದೇನು? – ಕಹಳೆ ನ್ಯೂಸ್
ಬೆಂಗಳೂರು: ಈಗಾಗಲೇ ಬಿಗ್ ಬಾಸ್ ಹಿಂದಿ ಒಟಿಟಿ ಸೀಸನ್ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್ ತಿಂಗಳಲ್ಲಿ ಶೋ ಆರಂಭವಾಗುತ್ತದೆ.
ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ಸ್ವತಃ ನಟಿಯೇ ಮಾಧ್ಯಮವೊಂದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್ಬಾಸ್ಮನೆ ಹೋಗುತ್ತಾರೆ ಎನ್ನಲಾಗಿತ್ತು. ಇದೀಗ ನಟಿ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯಿ ನೀಡಿ ʻʻಬಿಗ್ ಬಾಸ್ ಮನೆಗೆ ಹೋಗುವ ಯಾವ ಆಲೋಚನೆ ಸದ್ಯಕ್ಕೆ ನನಗೆ ಇಲ್ಲ . ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಚರ್ಚೆ ಮಾಡಿಲ್ಲʼʼ ಎಂದಿದ್ದಾರೆ.
ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.
ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.