Friday, September 20, 2024
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಸ್ತೆಗೆ ಬಿದ್ದಿದ್ದ ಮರ, ಮಣ್ಣು ತೆರವು ; ಚಾರ್ಮಾಡಿ ಘಾಟಿ ಸಂಚಾರ ಪುನರಾರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಬಿದ್ದಿದ್ದ ಮರ, ಮಣ್ಣು ಮುಂತಾದವುಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ.

ಘಾಟಿ ರಸ್ತೆಯಲ್ಲಿ ಮಣ್ಣು ಬಿದ್ದ ಕಾರಣ ಶುಕ್ರವಾರ ರಾತ್ರಿ ಮುಂಜಾಗ್ರತಾ ಕ್ರಮವಾಗಿ ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌ ಸ್ಥಳಕ್ಕೆ ಭೇಟಿ ನೀಡಿ ಮಂಗಳೂರು ವಿಭಾಗಕ್ಕೆ ಸಂಬಂಧಿಸಿ 7,9, 10 ಮತ್ತು 11ನೇ ತಿರುವು ಪ್ರದೇಶದಲ್ಲಿ ರಸ್ತೆಗೆ ಬಿದ್ದಿದ್ದ ಮರ, ಮಣ್ಣು ಇತ್ಯಾದಿಗಳನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಲಾಯಿತು.

ಜಾಹೀರಾತು

ಶಿರಾಡಿ ರಸ್ತೆಗೆ ಬಿದ್ದ ಕಲ್ಲು ; ಸಂಚಾರ ತಾತ್ಕಾಲಿಕ ಸ್ಥಗಿತ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಗಡಿ ದೇವಸ್ಥಾನದ ಮೇಲ್ಭಾಗದಲ್ಲಿ ಬೃಹತ್‌ ಗಾತ್ರದ ಬಂಡೆಕಲ್ಲೊಂದು ಹೆದ್ದಾರಿಗೆ ಬಿದ್ದ ಪರಿಣಾಮ ವಾಹನ ಸಂಚಾರ ಸ್ವಲ್ಪ ಹೊತ್ತು ಸಮಯ ತಡೆ ಹಿಡಿಯಲ್ಪಟ್ಟ ಘಟನೆ ಶನಿವಾರ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ವಾಹನಗಳು ಅಪಾಯಕ್ಕೆ ಸಿಲುಕಿಲ್ಲ.

ಈ ಘಟನೆ ನಡೆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಇಲಾಖೆ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿತ್ತು.
ಶನಿವಾರ ಬಿದ್ದ ಕಲ್ಲನ್ನು ಬದಿಗೆ ಸರಿಸಿದ ಬಳಿಕ ವಾಹನಗಳನ್ನು ಏಕಮುಖ ಸಂಚಾರದಲ್ಲಿ ಪುನರಾರಂಭಿಸಿದರು.