ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ : ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್ – ಕಹಳೆ ನ್ಯೂಸ್
![](https://www.kahalenews.com/wp-content/uploads/2024/07/5442b7fb-9601-457c-9f41-cf03fceef19a-696x853-1-696x450.jpeg)
ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು- ಮಂಗಳೂರು ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ.
ಮಂಗಳೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಸಕಲೇಶಪುರ ದೊಡ್ಡ ತೊಪ್ಲು ಎಂಬಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕಾರು ,ಲಾರಿ,ಗ್ಯಾಸ್ ಟ್ಯಾಂಕರ್ ಸಿಲುಕಿಕೊಂಡಿದೆ.
ಈ ಹೆದ್ದಾರಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತವಾಗುತ್ತಿದೆ.