Sunday, January 19, 2025
ಬೈಂದೂರುಸುದ್ದಿ

ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಶಾಸಕ ಮಂಜುನಾಥ ಭಂಡಾರಿ ಭೇಟಿ- ಕಹಳೆ ನ್ಯೂಸ್

ಬೈಂದೂರು : ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಕರ್ನಾಟಕ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಭೇಟಿ ನೀಡಿದರು. ಸೋಮೇಶ್ವರ ಅಭಿವೃದ್ಧಿ ಕಾಮಗಾರಿ ಮತ್ತು ಗುಡ್ಡ ಕುಸಿತ ಸ್ಥಳವನ್ನು ವೀಕ್ಷಿಸಿದರು. ಆ ಬಳಿಕ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಅಲ್ಲಿನ ನಾಗತೀರ್ಥ ಬಗ್ಗೆ ಸ್ಥಳೀಯರಲ್ಲಿ ಮಾಹಿತಿ ಪಡೆದುಕೊಂಡಿದ್ದರೆ.

ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಅವರಲ್ಲಿ ಸೋಮೇಶ್ವರ ಗುಡ್ಡ ಕುಸಿತ ಬಗ್ಗೆ ಮುಂಜಾಗ್ರತೆ ಕ್ರಮಕೈಗೊಳ್ಳುವಂತೆ ಚರ್ಚಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡುವೂರು, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಉಡುಪಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕೆ ಶೆಟ್ಟಿ ಗುಡಿಬೆಟ್ಟು, ಕಾಂಗ್ರೆಸ್ ಪಕ್ಷದ ವಕ್ತಾರ ವಿಕಾಸ್ ಹೆಗ್ಡೆ ಮೊಳಹಳ್ಳಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಬೈಂದೂರು ಭೂ ನ್ಯಾಯ ಮಂಡಳಿಯ ಸದಸ್ಯ ಮಾಣಿಕ್ಯ ಹೋಬಳಿದಾರ್, ಪಡುವರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ್ ಹೋಬಳಿದಾರ್, ಬೈಂದೂರು ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯ ಸದಾಶಿವ ಡಿ ಪಡುವರಿ, ತಾಲೂಕು ಕೆ.ಡಿ.ಪಿ ಸದಸ್ಯ ಜಗದೀಶ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ಟಿ ಶಂಕರ ಪೂಜಾರಿ, ರಘುರಾಮ್ ಶೆಟ್ಟಿ, ರಾಜೇಶ್ ಕೆ ಪಡುವರಿ, ಪ್ರಸನ್ನ ಶೆಟ್ಟಿ ಶಿರೂರು, ಮಹಾಲಿಂಗ ನಾಯ್ಕ್, ಮೊದಲಾದವರು ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು