Recent Posts

Monday, January 20, 2025
ಕ್ರೀಡೆಸುದ್ದಿ

ಪ್ರೊ ಕಬಡ್ಡಿ: ಬೆಂಗಾಲ್ ವಾರಿಯರ್ಸ್ ವಿರುದ್ಧ ಪಾಟ್ನಾ ಪೈರೇಟ್ಸ್ ಗೆಲುವು – ಕಹಳೆ ನ್ಯೂಸ್

ಪ್ರೊ ಕಬಡ್ಡಿ ಲೀಗ್ ಟೂರ್ನಿಯ 43 ನೇ ಪಂದ್ಯದಲ್ಲಿ ಆತಿಥೇಯ ಪಾಟ್ನಾ ಪೈರೇಟ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ಮುಖಾಮಖಿಯಾಯಿತು. ರೋಚಕ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ 29-27 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಬೆಂಗಾಲ್ ವಾರಿಯರ್ಸ್ ಅಂಕ ಖಾತೆ ತೆರೆದು ಆರಂಭಿಕ 7 ನಿಮಿಷದವರೆಗೆ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ನಿಧಾನವಾಗಿ ಚೇತರಿಸಿಕೊಂಡ ಪಾಟ್ನಾ ಅಂಕಗಳಿಕೆ ವೇಗ ಹೆಚ್ಚಿಸಿತು. ಹೀಗಾಗಿ ಮೊದಲಾರ್ಧದಲ್ಲಿ 15-12 ಅಂತರದ ಮುನ್ನಡೆ ಕಾಯ್ದುಕೊಂಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ದ್ವಿತೀಯಾರ್ಧದಲ್ಲಿ ಬೆಂಗಾಲ್ ಮುನ್ನಡೆಗಾಗಿ ಕಠಿಣ ಹೋರಾಟ ನಡೆಸಿತು. ಆದರೆ ಸಾಧ್ಯವಾಗಲಿಲ್ಲ. ದೀಪಕ್ ನರ್ವಾಲ್ 7 ರೈಡ್ ಅಂಕಗಳೊಂದಿಗೆ ಪಾಟ್ನಾ ಅಂತಿಮ ಹಂತದಲ್ಲಿ 29-27 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು