Recent Posts

Sunday, January 19, 2025
ಸುದ್ದಿ

ನವೆಂಬರ್ 3 ರಂದು ಚುನಾವಣೆ: ಮತದಾರರನ್ನು ಸೆಳೆಯಲು ಅಂತಿಮ ಕ್ಷಣದ ಕಸರತ್ತು – ಕಹಳೆ ನ್ಯೂಸ್

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಅಂತಿಮ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ.

ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದು, ಜಮಖಂಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಂದ ಹಾಗೆ ಅವರು ಈ ರೀತಿ ಹೇಳಿದ್ದು, ತಾವು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ತೆಗೆದುಕೊಂಡ ಜನಪರ ಕಾರ್ಯಕ್ರಮವೊಂದನ್ನು ಸಮರ್ಥಿಸಿಕೊಳ್ಳುವ ಸಲುವಾಗಿ. ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿರುವ ರಾಜ್ಯಗಳಲ್ಲಿ ಯಾರಾದರೂ ಉಚಿತವಾಗಿ ಅಕ್ಕಿ ಕೊಟ್ಟಿದ್ದಾರೆ ಎಂದು ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಸವಾಲು ಎಸೆದಿದ್ದಾರೆ.