Recent Posts

Friday, November 22, 2024
ಕೇರಳಬೆಂಗಳೂರುರಾಜ್ಯಸುದ್ದಿ

ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್‌ 03: ದೇಶಾದ್ಯಂತ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೇರಳ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಜನರನ್ನು ಭಯಗೊಳಿಸಿದ್ದು, ಕರ್ನಾಟಕದಲ್ಲಿ ನಿರಂತರವಾಗಿ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿದೆ. ಇತ್ತ ಭರ್ಜರಿ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ.

ವಯನಾಡು ಸೇರಿದಂತೆ ಕೇರಳದ ಉತ್ತರದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 3 ರಿಂದ, ಮಳೆ ಚಟುವಟಿಕೆ ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಇದಾದ ನಂತರ ಮುಂದಿನ ನಾಲ್ಕು ದಿನಗಳ ಕಾಲ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಆಗಸ್ಟ್ 3 ರಿಂದ ಆಗಸ್ಟ್ 5 ರವರೆಗೆ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳಿಗೆ, ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದ್ದು, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಭಾರೀ ಮಳೆಯಿಂದಾಗಿ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಗುಜರಾತ್ ಮತ್ತು ಕೇರಳ ರಾಜ್ಯಗಳ ಕರಾವಳಿ ಸಮುದ್ರಗಳಲ್ಲಿ ಸರಾಸರಿ ಸಮುದ್ರಮಟ್ಟದಲ್ಲಿ ಉಂಟಾದ ಮೇಲುಬ್ಬರದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ & ಮಲೆನಾಡು ಪ್ರದೇಶಗಳ ಕೆಲವೆಡೆ ರಸ್ತೆ ಅಡಚಣೆಗಳು, ಹಠಾತ್ ಪ್ರವಾಹ & ಭೂಕುಸಿತವುಂಟಾಗುವ ಸಾಧ್ಯತೆಗಳಿದೆ. ಹೆಚ್ಚಿನ ಮಳೆಯಿಂದಾಗಿ ನದಿಪಾತ್ರಗಳಿಗೆ ಹೆಚ್ಚಿನ ಒಳಹರಿವು ಕಂಡುಬರಲಿದೆ.