ಮೂರನೇ ದಿನದ ಮೈಸೂರು ಚಲೋಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು ಸಾಥ್ -ಕಹಳೆ ನ್ಯೂಸ್
ಬೆಂಗಳೂರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಶನಿವಾರ ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಭಾನುವಾರ ಕೆಂಗಲ್ನಲ್ಲಿ ಕೊನೆಗೊಂಡಿತ್ತು. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಅವರ ಹುಟ್ಟೂರು ಕೆಂಗಲ್ನಲ್ಲಿರುವ ಪ್ರತಿಮೆಗೆ ಮಾರ‍್ಪಣೆ ಮಾಡುವ ಮೂಲಕ ಮೂರನೇ ದಿನದ ಪಾದಯಾತ್ರೆಗೆ ಚಾಲನೆ ಕೊಡಲಾಯಿತು. ಮೂರನೇ ದಿನದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು ಸಂಜೀವ ಮಠಂದೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಬಿಜೆಪಿ ರ‍್ಯರ‍್ತರು ಭಾಗವಹಿಸಿದ್ದರು.