Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಶೆರ್ ಲಾಕ್ ಪಬ್‌ನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ; ಪುತ್ತೂರಿನ ನಾಲ್ವರು ಅಂದರ್..!! – ಕಹಳೆ ನ‌್ಯೂಸ್

ಮಂಗಳೂರು, ಆ.06 : ಪಬ್‌ವೊಂದಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ನಿಂದನೆ ಮಾಡಿರುವ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾಂಡೇಶ್ವರದ ಮಾಲ್‌ವೊಂದರಲ್ಲಿರುವ ಪಬ್‌ಗೆ ಜುಲೈ ೩ರಂದು ಮಹಿಳೆಯೊಬ್ಬರು ತನ್ನ ಗೆಳತಿಯೊಂದಿಗೆ ತೆರಳಿದ್ದರು. ಈ ವೇಳೆ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಯುವಕರ ತಂಡ, ಮಹಿಳೆಗೆ ಕಿರುಕುಳ ನೀಡಿದ್ದಾರೆ. ಜೊತೆಗೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಅವರನ್ನು ಚುಡಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಮಹಿಳೆಯು ದೂರು ನೀಡಿದ್ದು, ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀದರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಓರ್ವ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಳಿದ ಮೂವರು ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.