Friday, September 20, 2024
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು : ಆಸ್ಟ್ರೇಲಿಯಾದಲ್ಲಿ ಆ.20ರಿಂದ ಆರಂಭವಾಗಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡುವ ಜೊತೆಗೆ ಆ.20ರಿಂದ ಸೆ.8ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ, ಪುತ್ತೂರಿನ ಎಂ. ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮಿ ಎನ್. ಶೆಣೈ ದಂಪತಿಯ ಪುತ್ರಿ ಕುಮಾರಿ ಪ್ರತೀಕ್ಷಾ ಎನ್. ಶೆಣೈ ಇವರು 50 ಮೀಟರ್, 100 ಮೀಟರ್ ಮತ್ತು 200 ಮೀಟರ್ ಬ್ರೆಸ್ಟ್ ಸ್ಟ್ರೋಕ್‍ನಲ್ಲಿ ಪ್ರಥಮ ಸ್ಥಾನ ಪಡೆದು ಮೂರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಪುತ್ತೂರು ದರ್ಬೆಯ ನಳಿನಾಕ್ಷ ಎನ್. ಮತ್ತು ಗಾಯತ್ರಿ ಪಿ. ದಂಪತಿ ಪುತ್ರ ಅನಿಕೇತ್ ಇವರು 200 ಮೀಟರ್ ಇಂಡಿವಿಜುವಲ್ ಮಿಡ್ಲೇ, 100 ಮೀಟರ್ ಬ್ಯಾಕ್ ಸ್ಟ್ರೋಕ್, 200 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಸ್ಪರ್ಧಿಸಿ ಮೂರರಲ್ಲೂ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

         

ಜಾಹೀರಾತು

ದ್ವಿತೀಯ ಪಿಯು ವಿದ್ಯಾರ್ಥಿ ಪುತ್ತೂರು ದರ್ಬೆಯ ಕೇಶವಕುಮಾರ್. ಕೆ. ಎಂ. ಹಾಗೂ ಮೀನಾಕ್ಷಿ ದಂಪತಿಯ ಪುತ್ರ ಧನ್ವಿತ್ ಅವರು 50 ಮೀಟರ್ ಫ್ರೀ ಸ್ಟೈಲ್, 100 ಮೀಟರ್ ಫ್ರೀ ಸ್ಟೈಲ್, 200 ಮೀಟರ್ ಫ್ರೀ ಸ್ಟೈಲಿನಲ್ಲಿ ತೃತೀಯ ಸ್ಥಾನಿಯಾಗಿ ಮೂರು ಕಂಚಿನ ಪದಕಗಳನ್ನು ಗೆದ್ದುಕೊಂಡು ಸಾಧನೆ ಮಾಡಿದ್ದಾರೆ. ಈ ಮೂವರು ವಿದ್ಯಾರ್ಥಿಗಳು ಈಜುವಿಕೆಯಲ್ಲಿ ನಿಪುಣರಾಗಿದ್ದು ಆಸ್ಟ್ರೇಲಿಯಾದಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲಿ ್ಲ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಪ್ರಸ್ತುತ ಇವರು ಪುತ್ತೂರಿನ ಬಾಲವನ ಈಜುಕೊಳದ ತರಬೇತುದಾರರಾದ ಪಾರ್ಥ ವಾರಣಾಸಿ, ರೋಹಿತ್ ಪಿ. ಹಾಗೂ ದೀಕ್ಷಿತ್ ಇವರ ಮಾರ್ಗದರ್ಶನದಲ್ಲಿ ತರಬೇತು ಪಡೆಯುತ್ತಿದ್ದಾರೆ.