Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ, ಬಲ್ನಾಡು ಪುತ್ತೂರು, ಇದರ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ, ಬಲ್ನಾಡು ಪುತ್ತೂರು, ಇದರ ಬೆಳ್ಳಿ ಹಬ್ಬ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲಿ ನಡೆಯಿತು.

ಈ ಸಂದರ್ಭದಲ್ಲಿ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಸದಸ್ಯರು ಬಲ್ನಾಡು ಗ್ರಾಮಪಂಚಾಯತ್, ಪ್ರಕಾಶ್ ಕೆಲ್ಲಾಡಿ, ಗಿರೀಶ್ ಕಂಟ್ರಾನಿಮೂಲೆ, ಹೇಮಚಂದ್ರ ಮುದಲಾಜೆ, ಪ್ರವೀಣ್ ಓಟೆ, ಅಶೋಕ್, ಚರಣ್ ಕುಲಾಲ್, ಪೂರ್ಣಪ್ರಕಾಶ್ ಕಾಂತಿಲ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆ. 25 ಮತ್ತು ಆ. 26ರಂದು ಬಲ್ನಾಡು ವಿನಾಯಕನಗರ ಕ್ರೀಡಾಂಗಣದಲ್ಲಿ ನಡೆಯಲಿರುವ 25ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ ಕಲರ್ಸ್ ಕನ್ನಡ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ದಾನ ಸಂಭ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಭಟ್ಟಿವಿನಾಯಕ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಸಹಕಾರದೊಂದಿಗೆ ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಹಾಗೂ ಬಲಿವಾಡು ಸೇವೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ವಿನಂತಿಸಿಕೊAಡಿದ್ದಾರೆ.