Recent Posts

Monday, April 14, 2025
ಸುದ್ದಿ

ಚಾರಿತ್ರ‍್ಯ ಹರಣ ಮಾಡುವ ಸುಳ್ಳು ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ- ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಚಾರಿತ್ರ‍್ಯ ಹರಣ ಮಾಡುವ ಸುಳ್ಳು ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಡಿವಿಎಸ್ ಬಗ್ಗೆ ಹರಿದಾಡುತ್ತಿರುವ ಅಶ್ಲೀಲ ವಿಚಾರ ಅವರ ಮನಸ್ಸಿಗೆ ನೊವುಂಟು ಮಾಡಿತ್ತು. ಅವರ ಚಾರಿತ್ರ‍್ಯ ಹರಣ ಮಾಡಿ ರಾಜಕೀಯವಾಗಿ ಮುಗಿಸುವ ಉದ್ದೇಶದಿಂದ ವಿರೋಧಿಗಳು ವ್ಯವಸ್ಥಿತ ಸಂಚು ಮಾಡಿದ್ದಾರೆ ಎಂದು ದೂರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನನ್ನನ್ನು ನೈತಿಕತೆ ಕೆಳೆದುಕೊಂಡಿರುವಂತೆ ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಆದರೆ ನನ್ನ ಸಾರ್ವಜನಿಕ ಜೀವನದಲ್ಲಿ ನಾನು ಅತ್ಯಂತ ಸೂಕ್ಷ್ಮ ವ್ಯಕ್ತಿಯಾಗಿದ್ದು, ನನ್ನ ಬಗ್ಗೆ ಇಲ್ಲ ಸಲ್ಲದ ಸುಳ್ಳು ವಿಚಾರ ಹರಿಬಿಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಸದಾನಂದಗೌಡ ಕೋರಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ