Saturday, November 16, 2024
ದಕ್ಷಿಣ ಕನ್ನಡಸುದ್ದಿ

ದೆಹಲಿಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಮಾನ್ಯ ಸಚಿವರನ್ನು ಈ ಸಂದರ್ಭದಲ್ಲಿ ಸಂಸದರು ಆಹ್ವಾನಿಸಿದರು ಹಾಗೂ ಮಂಗಳೂರಿನ KIOCL ಸ್ಥಾವರಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು NMDC ಯೊಂದಿಗೆ ಅದರ ವಿಲೀನದ ಸಾಧ್ಯತೆಗಳ ಕುರಿತು ಚರ್ಚಿಸಿದರು.

ಬಂದರಿನ ಸಮೀಪದಲ್ಲಿರುವ ಕಾರಣಕ್ಕೆ ಕೆಐಓಸಿಎಲ್ ನ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ, ಕೆಐಓಸಿಎಲ್ ಮಂಗಳೂರು ಸ್ಥಾವರದಲ್ಲಿ ಪೂರ್ಣ ಪ್ರಮಾಣದ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಲು ಆಯ್ಕೆಗಳನ್ನು ಕಂಡುಕೊಳ್ಳುವಂತೆ ವಿನಂತಿಸುವುದರ ಜೊತೆಗೆ ಉದ್ಯೋಗ ಸೃಷ್ಟಿ ಮತ್ತು ಪ್ರಸ್ತುತ ಉದ್ಯೋಗಿಗಳ ಸುರಕ್ಷತೆಯ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು