Tuesday, January 21, 2025
ಬೆಂಗಳೂರುಸುದ್ದಿ

5ನೇ ದಿನದ ಮೈಸೂರು ಚಲೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತರು- ಕಹಳೆ ನ್ಯೂಸ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ನಿನ್ನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇನ್ನು ಐದನೇ ದಿನದ ಮೈಸೂರು ಚಲೋಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ಪರಮೇಶ್ವರಿ ಭಟ್ ಬಬ್ಬಿಲಿ, ಕಿರಣ್ ಕುಮಾರ್ ರೈ, ಭರತ್ ಚನಿಲ, ಚಂದ್ರಶೇಖರ ಬಪ್ಪಳಿಗೆ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು