Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿ – ಕಹಳೆ ನ್ಯೂಸ್

ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ ( 15) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸು ಬರದ್ದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದೆ.
ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದ ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದರು.
ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು