Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ NATA ತರಗತಿ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಕನಸಿನ ಉದ್ಯೋಗವನ್ನು ಗಮನದಲ್ಲಿಟ್ಟುಕೊಂಡು ಪದವಿ ಪೂರ್ವ ಸಂದರ್ಭದಲ್ಲಿಯೇ ಸಮರ್ಪಕ ತಯಾರಿ ನಡೆಸಿಕೊಳ್ಳುವುದು ಉತ್ತಮ. ಉದ್ಯೋಗ ಗಳಿಸುವ ಸಂದರ್ಭದಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾಗಿ ನೀಡಬಹುದಾದ ಕೊಡುಗೆಗಳ ಕುರಿತೂ ಯೋಚನೆ, ಯೋಜನೆ ರೂಪಿಸಿಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪ.ಪೂ.ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಓಂಖಿಂ ತರಗತಿಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಜಗತ್ತಿನ ಜೀವನ ಶೈಲಿಯಲ್ಲಿ ವಾಸ್ತುಶಿಲ್ಪ ಬಹಳ ಮಹತ್ವವನ್ನು ಪಡೆದುಕೊಳ್ಳುತ್ತಿದೆ. ಕಟ್ಟಡ ನಿರ್ಮಾಣಗಳಲ್ಲಿ ಭಾರತೀಯ ವಾಸ್ತುಶೈಲಿಯನ್ನು ಅಳವಡಿಸಿಕೊಳ್ಳುವುದರಿಂದ ಧನಾತ್ಮಕ ಶಕ್ತಿ ರೂಪುಗೊಳ್ಳುವಂತೆ ಮಾಡಬಹುದು. ಅಪೂರ್ವವಾದ ವಾಸ್ತುಶಿಲ್ಪಕ್ಕೆ ಪುರಾತನ ಭಾರತೀಯರು ಹಲವಾರು ಕೊಡುಗೆಗಳನ್ನು ನೀಡಿದ್ದಾರೆ ಎಂದು ವಿವರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

NATA ತರಬೇತುದಾರ ಸುನಿಲ್ ಅಬ್ರಹಾಂ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕೀರ್ತನ್ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಶ್ರೀವತ್ಸ ಪಿ. ಕಾರ್ಯಕ್ರಮ ನಿರೂಪಿಸಿದರು.