Sunday, January 19, 2025
ದಕ್ಷಿಣ ಕನ್ನಡದೆಹಲಿಪುತ್ತೂರುರಾಷ್ಟ್ರೀಯವಾಣಿಜ್ಯಸುದ್ದಿ

ಪುತ್ತೂರು ಗೇರು ಸಂಶೋಧನಾ ಕೇಂದ್ರದ ಎರಡು ತಳಿ ಪ್ರಧಾನಿ ನರೇಂದ್ರ ಮೋದಿಯಿಂದ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್‌ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ ಪೋಷಕಾಂಶ ಸಮೃದ್ಧ ತಳಿಗಳು ಬಿಡುಗಡೆಗೊಳ್ಳಲಿವೆ.

ಇದರಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್‌ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ಸೇರಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೇತ್ರಾ ಜಂಬೋ-1 ತಳಿಯನ್ನು ಈಗಿನ ನಿರ್ದೇಶಕ ಡಾ| ದಿನಕರ ಅಡಿಗ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಈ ತಳಿ ಕೂಲಿ ಖರ್ಚನ್ನು ಗಮನಾರ್ಹ ಪ್ರಮಾಣದಲ್ಲಿ ಉಳಿಸುತ್ತದೆ. ಇದರಲ್ಲಿ 12 ಗ್ರಾಂ ತೂಕದ ಬೀಜಗಳಿರುತ್ತವೆ. ಶೇ. 90ಕ್ಕೂ ಹೆಚ್ಚಿನ ಬೀಜಗಳದ್ದು ಒಂದೇ ಗಾತ್ರ.

ಜಾಹೀರಾತು
ಜಾಹೀರಾತು
ಜಾಹೀರಾತು

ನೂರು ಕೆಜಿ ಬೀಜ ಸಂಸ್ಕರಣೆಯಿಂದ 29ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್‌ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್‌ (ಡಬ್ಲ್ಯೂ 130) ಈ ತಳಿಯ ತಿರುಳಿನದ್ದು.

ನೇತ್ರಾ ಗಂಗಾ ತಳಿಯನ್ನು ಹಿಂದಿನ ಪ್ರಭಾರ ನಿರ್ದೇಶಕ ಡಾ| ಗಂಗಾಧರ ನಾಯಕ್‌ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಇದು ದೊಡ್ಡ ಗಾತ್ರದ ಬೀಜವನ್ನು (12 ರಿಂದ 13 ಗ್ರಾಂ), ಗೊಂಚಲುಗಳಲ್ಲಿ ಬಿಡುವ ತಳಿಯಾಗಿದ್ದು ಉತ್ತಮ ಫಸಲು ಕೊಡುತ್ತದೆ. ಪ್ರಾರಂಭದ ಒಂದೆರಡು ವರ್ಷಗಳಲ್ಲೇ ಹೂ ಬಿಡುವ ಹಾಗೂ ದೀರ್ಘಾವಧಿ (ಡಿಸೆಂಬರ್‌ನಿಂದ ಎಪ್ರಿಲ್‌ ತನಕ) ಹೂವು ಮತ್ತು ಗೇರು ಬೀಜ ಬಿಡುವ ತಳಿ. ತಿರುಳಿನ ಪ್ರಮಾಣ ಶೇ. 29.5 ಇರುತ್ತದೆ. ತಳಿಯು ಸವರುವಿಕೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವುದರಿಂದ ಘನ ಸಾಂದ್ರ ಪದ್ಧತಿಯಲ್ಲಿ ಬೇಸಾಯಕ್ಕೆ ಯೋಗ್ಯ. ಮೂರನೆ ವರ್ಷದಲ್ಲೇ ಗಿಡವೊಂದಕ್ಕೆ 5 ಕೆಜಿಗಿಂತ ಮೇಲ್ಪಟ್ಟು ಇಳುವರಿ ಕೊಡುತ್ತದೆ.