Saturday, September 21, 2024
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿ ಆಶಿಶ್‌ ಕೆ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್.‌ ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು 50 ಮೀಟರ್‌ ಬಟರ್‌ಫ್ಲೈ ಹಾಗೂ 50 ಮೀಟರ್‌ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ, 50 ಮೀಟರ್‌ ಬ್ಯಾಕ್ ಸ್ಟ್ರೋಕ್‌ ನಲ್ಲಿ ಬೆಳ್ಳಿಯ ಪದಕವನ್ನು ಪಡೆಯುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌ ವಿ. ಎಸ್, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು