Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ   2024-2025ನೇ ಸಾಲಿನ 8 ಮತ್ತು 9ನೇ ತರಗತಿಯ ಪೋಷಕರ ಸಭೆ-ಕಹಳೆ ನ್ಯೂಸ್

8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಯ ಪ್ರಗತಿಯ ಬಗ್ಗೆ ಶಿಕ್ಷಕ ಮತ್ತು ಪೋಷಕರ ಜವಾಬ್ದಾರಿಯನ್ನು ನೆನಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಹ ಸಂಚಾಲಕರಾದ ರಮೇಶ್ ಎನ್, ಪ್ರೌಢಶಾಲೆಯ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಲಕ್ಷ್ಮೀ ರಘುರಾಜ್, ಮುಖ್ಯೋಪಾಧ್ಯಾಯರಾದ ಗೋಪಾಲ ಎಂ ಉಪಸ್ಥಿತರಿದ್ದರು. ಶ್ರೀಮತಿ ವಿನುತಾ ಮಾತಾಜಿ 9 ನೇ ಹಾಗೂ ದೀಕ್ಷಿತ ಮಾತಾಜಿ 8ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ವಿಶ್ಲೇಷಣೆಯನ್ನು ಮಾಡಿದರು. ಶಿಕ್ಷಕರ-ಪೋಷಕರ ಸಂವಾದ ಜರಗಿತು. ಕಾರ್ಯಕ್ರವನ್ನು ಮಾತಾಜಿಯವರಾದ ಧೃತಿ ನಿರೂಪಿಸಿ, ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ನಿಕ್ಷಿತಾ ವಂದಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು