Saturday, September 21, 2024
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿಹಾಸನ

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ; ರೈಲು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ
ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಜಾಹೀರಾತು

ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.