Friday, September 20, 2024
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಬಾಂಗ್ಲಾದೇಶದಲ್ಲಿನ ಹಿಂದುಗಳ ರಕ್ಷಣೆ ಸಮಿತಿ ರಚಿಸಿದ ಮೋದಿ ಸರಕಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್; ಬಾಂಗ್ಲಾದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳು ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ.

‘ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದೆ’ಎಂದು ಸರ್ಕಾರ ಹೇಳಿದೆ.

ಜಾಹೀರಾತು

“ಸಮಿತಿಯ ನೇತೃತ್ವವನ್ನು ಎಡಿಜಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಪೂರ್ವ ಕಮಾಂಡ್ ವಹಿಸಲಿದೆ. ಇನ್ನು ದಕ್ಷಿಣ ಬಂಗಾಳ, ತ್ರಿಪುರ ಬಿಎಸ್‌ಎಫ್‌ ನ ಐಜಿಗಳು, ಲ್ಯಾಂಡ್‌ ಪೋರ್ಟ್ಸ್‌ ಅಥಾರಿಟಿ ಆಫ್‌ ಇಂಡಿಯಾ(LPAI)ನ ಸೆಕ್ರೆಟರಿ ಈ ಸಮಿತಿಯ ಸದಸ್ಯರಾಗಿರಲಿದ್ದಾರೆ” ಎಂದು ಹೇಳಿದೆ.

ಬಾಂಗ್ಲಾದಲ್ಲಿ ಭುಗಿಲೆದ್ದಿರುವ ದಂಗೆಯಲ್ಲಿ ಅಲ್ಪಸಂಖ್ಯಾತ ಹಿಂದು ದಿನೇ ದಿನೇ ನರಕಯಾತನೆ ಅನುಭವಿಸುವಂತಾಗಿದೆ. ಕಂಡ ಕಂಡಲ್ಲಿ ಹಿಂದುಗಳನ್ನು, ಅವರಿಗೆ ಸಂಬಂಧಿಸಿದ ಮನೆ ಅಂಗಡಿಗಳನ್ನು ಮತ್ತು ದೇಗುಲಗಳನ್ನು ಕಿಡಿಗೇಡಿಗಳು ಪುಡಿಗಟ್ಟಿದ್ದಾರೆ. ಕೈಗೆ ಸಿಕ್ಕವಸ್ತುಗಳನ್ನು ದೋಚುತ್ತಿದ್ದಾರೆ.

ಅಲ್ಲಿನ ಸುಮಾರು 600 ಜನ ಅಕ್ರಮವಾಗಿ ಪಶ್ಚಿಮ ಬಂಗಾಳದ ಗಡಿಪ್ರದೇಶದೊಳಗೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ್ದು, ಅವರನ್ನು ತಡೆಯುವಲ್ಲಿ ಗಡಿ ಭದ್ರತಾ ಪಡೆ(BSF) ಯಶಸ್ವಿಯಾಗಿದೆ. ಬಾಂಗ್ಲಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಪ್ರಾಣಭೀತಿ ಎದುರಿಸುತ್ತಿರುವುದಾಗಿ ಹೇಳಿಕೊಂಡು ಅನೇಕ ಜನರು ಭಾರತದ ಗಡಿಯೊಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಬಿಎಸ್‌ಎಫ್‌ ಸಿಬ್ಬಂದಿ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದಕ್ಷಿಣ್ ಬೆರುಬರಿ ಗ್ರಾಮದಲ್ಲಿ ಈ ಗುಂಪು ಭಾರತದ ಗಡಿ ದಾಟಲು ಪ್ರಯತ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.