ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಬೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್
ದೇಶದ ಯಾವುದೇ ಪ್ರದೇಶ ಮತ್ತು ನಾಗರೀಕ ರಿಗಾಗಿ ಕೆಲಸ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಯವರು ವಯನಾಡಿನಲ್ಲಿ ನುಡಿದರು.
ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಆ.10) ಭೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಭೇಟಿಯಾಗಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಭಾಗಿಯಾಗಿದ್ದರು.
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಭೀಕರ ಪ್ರಕೃತಿ ವಿಕೋಪ ನಡೆದ ದಿನ ಬೆಳಗ್ಗೆ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದ್ದೆ. ನೆರವು ನೀಡುವುದಾಗಿ, ಆದಷ್ಟು ಬೇಗ ಸ್ಥಳಕ್ಕೆ ತಲುಪಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದೆ. ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಸೇನೆ, ಪೆÇಲೀಸರು, ವೈದ್ಯರು ಎಲ್ಲರೂ ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಲು ಪ್ರಯತ್ನಿಸಿದರು, ನಾವೆಲ್ಲರೂ ಅವರೊಂದಿಗೆ ನಿಂತಿದ್ದು, ಕೇಂದ್ರ ಸರ್ಕಾರವು ಕೇರಳ ಸರ್ಕಾರದ ಜತೆ ನಿಂತಿದೆ ಮತ್ತು ಹಣದ ಕೊರತೆಯಿಂದ ಯಾವುದೇ ಕೆಲಸಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.
“ಭೂಕುಸಿತದ ಬಗ್ಗೆ ನನಗೆ ತಿಳಿದಾಗಿನಿಂದ ನಾನು ಮಾಹಿತಿ ತೆಗೆದುಕೊಳ್ಳುತ್ತಿದ್ದೇನೆ, ದುರಂತದಲ್ಲಿ ಸಹಾಯ ಮಾಡಬಹುದಾದ ಕೇಂದ್ರ ಸರ್ಕಾರದ ಎಲ್ಲಾ ಏಜೆನ್ಸಿಗಳನ್ನು ತತ್ ಕ್ಷಣವೇ ಸಜ್ಜುಗೊಳಿಸಲಾಯಿತು. ಈ ದುರಂತ ಸಾಮಾನ್ಯವಲ್ಲ. ಸಾವಿರಾರು ಕುಟುಂಬಗಳ ಕನಸುಗಳು ಭಗ್ನಗೊಂಡಿವೆ. ನಾನು ಸ್ಥಳದಲ್ಲೇ ಪರಿಸ್ಥಿತಿ ನೋಡಿದ್ದೇನೆ. ಈ ದುರಂತವನ್ನು ಎದುರಿಸಿದ ಸಂತ್ರಸ್ತರನ್ನು ನಾನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಿದ್ದೇನೆ. ನಾನು ಆಸ್ಪತ್ರೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನೂ ಭೇಟಿ ಮಾಡಿದ್ದೇನೆ” ಎಂದು ಹೇಳಿದರು.
ಭೂಕುಸಿತ ಪೀಡಿತ ಪ್ರದೇಶಕ್ಕೂ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ತೆರವು ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಮಾತುಕಥೆ ನಡೆಸಿದರು.