Thursday, February 6, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ -ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸಾಜ ಇದರ ನೇತೃತ್ವದಲ್ಲಿ

ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರ (ರಿ.) ಸಾಜ, ಬಲ್ನಾಡು ಇದರ ಸಹಯೋಗದೊಂದಿಗೆ

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಸಾಜ ಇವರ ಸಂಯುಕ್ತ ಆಶ್ರಯದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿಗ್ಗೆ ಮಕ್ಕಳಿಗೆ ,ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

ಬಳಿಕ ಸಂಜೆ ಸಾಜ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಧನಂಜಯ ಕೆ. ಕೂಟೇಲು ಇವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಇನ್ನು ಕಾರ್ಯಕ್ರಮದಲ್ಲಿ ಸ್ವರ್ಗ ಸ್ವಾಮಿ ವಿವೇಕಾನಂದ ಶಾಲೆಯ ಶಿಕ್ಷಕರಾದ ಶ್ರೀ ಹರಿ ಶಂಕರ ಶರ್ಮ ಪದರಂಜ ಧಾರ್ಮಿಕ ಉಪನ್ಯಾಸ ನೀಡಲಿದ್ದು, ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ   ಶ್ರೀಮತಿ ಪರಮೇಶ್ವರಿ ಭಟ್ ಬಬ್ಬಿಲಿ, ಉಪಾಧ್ಯಕ್ಷ ರವಿಚಂದ್ರ ಸಾಜ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾಶ್ರೀ ಸರೋಳಿಕಾನ, , ಬಲ್ನಾಡು ಸಾಜ, ಬಲ್ನಾಡು ಶ್ರೀದುರ್ಗಾ-ವೆಂಕಟ್ರಮಣ ಭಜನಾ ಮಂದಿರ(ರಿ) ಇರದ ಅಧ್ಯಕ್ಷ ಬಾಲಕೃಷ್ಣ ಮುರುಂಗಿ, ಸಾಫ್ಟ್‌ವೇರ್ ಇಂಜಿನಿಯರ್ ಶ್ರೀಮತಿ ಕೃತಿ ಶೆಟ್ಟಿ ಸಾಜ, ಹಿರಿಯ ದೈವ ನರ್ತಕರಾದ ಕುಟ್ಟಿ ನಲಿಕೆ, ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದ ಗೌರವಾಧ್ಯಕ್ಷರಾದ ಜನಾರ್ಧನ ಪೂಜಾರಿ ಪೂಜಾರಿ ಕಾಡ್ಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.