Sunday, January 19, 2025
ಕ್ರೈಮ್ರಾಜ್ಯಸುದ್ದಿಹುಬ್ಬಳ್ಳಿ

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ ದೂರು ನೀಡಿದ ವಿಷಯ ತಿಳಿದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.