Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಆ.25ರಂದು 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ – ಕಹಳೆ ನ್ಯೂಸ್

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು, ವಿಶ್ವ ಹಿಂದೂ ಪರಿಷತ್ ಬಜರಂಗದಳ ರೆಖ್ಯ ಘಟಕ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ಊರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನೇತೃತ್ವದಲ್ಲಿ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಆ.25ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಧಾರ್ಮಿಕ ಸಭಾ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಧಾರ್ಮಿಕ ಭಾಷಣಗಾರರಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ರಘು ಸಕಲೇಶಪುರ ಅವರು ಆಗಮಿಸಲಿದ್ದಾರೆ ಮತ್ತು ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಮತ್ತು ಅನೇಕ ಗಣ್ಯ ಅಥಿತಿಗಳ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7:00 ರಿಂದ ” ಪಂಡ ಕೇನುಜೆರ್ ” ತುಳು ಹಾಸ್ಯಮಯ ನಾಟಕ ನಡೆಯಲಿದೆ

ಜಾಹೀರಾತು
ಜಾಹೀರಾತು
ಜಾಹೀರಾತು