Recent Posts

Monday, January 20, 2025
ಸುದ್ದಿ

ಅಕ್ರಮ ಕಲ್ಲಿನ ಗಣಿಕಾರಿಕೆ: ಗ್ರಾಮಸ್ಥರಿಂದ ಆರೋಪ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನ ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಣದಮೂಲೆ ಎಂಬಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರು ಅಕ್ರಮ ಕಲ್ಲಿನ ಗಣಿಕಾರಿಕೆ ಮಾಡಲು ತಯಾರು ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥ ರಾಮಣ್ಣ ವಿಟ್ಲ ಅವರು ಆರೋಪಿಸಿದ್ದಾರೆ.

ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಣ್ಣ, ಇಲ್ಲಿನ ಸರ್ವೆ ನಂಬರ್ 58/2 ರಲ್ಲಿ ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಸಲು ಮುಂದಾಗಿದ್ದಾರೆ. ಇದಕ್ಕಾಗಿ ಎರಡು ದೊಡ್ಡ ದೊಡ್ಡ ಮಿಷನ್‌ಗಳನ್ನು ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪರಿಸರದಲ್ಲಿ ಸುಮಾರು 20 ಕ್ಕು ಹೆಚ್ಚಿನ ಮನೆಗಳಿದ್ದು, ವಾಸ ಮಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ದರಿಂದ ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾನೂನು ಬಾಹಿರ ಕೃತ್ಯವನ್ನು ತಡೆಯಬೇಕು. ಇಲ್ಲದಿದ್ದರೆ ಗ್ರಾಪಂ ಹಾಗೂ ತಾಪಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.