Tuesday, January 21, 2025
ಸುದ್ದಿ

‘ಮುಡಾ’ ಹಗರಣ : ಸಿಎಂ ಪರವಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಕೋರ್ಟ್ -ಕಹಳೆನ್ಯೂಸ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಮಧ್ಯ ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿ ಸಲ್ಲಿಸಿದ್ದರು.ಈ ವೇಳೆ ಯಾವ ಕಾನೂನಿನ ಅಡಿ ನೀವು ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಲಂ ಪಾಷಾ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ತಡೆಹಿಡಿಯಲು ಕೋರುತ್ತಿದ್ದಾರೆ ಹೀಗಾಗಿ ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಂತದಲ್ಲಿ ಸಂಬಂಧವಿಲ್ಲದ ವ್ಯಕ್ತಿಯವಾದ ಆಲಿಸಬಾರದು ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಪರ ಹಿರಿಯವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಸಂತ್ರಸ್ತರ? ಅಥವಾ ದೂರುದಾರರ? ಸ್ಪಷ್ಟಪಡಿಸಿ ಎಂದು ಜಡ್ಜ್ ಸೂಚಿಸಿದರು.