Wednesday, January 22, 2025
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆ- ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.

ಹಿರಿಯ ಪತ್ರಕರ್ತ ಸಂಜೀವ ಕುಂದರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ಉಡುಪಿ ಪತ್ರಿಕಾ ಭವನ ಸಮಿತಿಯ ಸಹ ಸಂಚಾಲಕ ಅಂಕಿತ್ ಶೆಟ್ಟಿ, ಪತ್ರಕರ್ತರಾದ ಮೈಕಲ್ ರೋಡ್ರಿಗಸ್, ನಿತೀಶ್ ಮಂಚಿ, ರಿಚರ್ಡ್ ಡಿಸೋಜ, ಹರೀಶ್ ಕುಂದರ್, ಆದಿತ್ಯ ಐತಾಳ್, ಹಿರಿಯರಾದ ಎಂ.ಆರ್.ಪೈ ಮೊದಲಾದವರು ಉಪಸ್ಥಿತರಿದ್ದರು. ಶಶಿಧರ್ ಮಾಸ್ತಿಬೈಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು