Recent Posts

Friday, November 22, 2024
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಮೂರು ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.