Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪೊಳಲಿ ಜ್ಞಾನ ವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಳ ತಾಲೂಕಿನ ಪೊಳಲಿ ವಲಯದ ಬೆಂಜನಪದವು ಬ್ರಹ್ಮರಕೊಟ್ಲು ಮೇರೇ ಮಜಲು, ಕೊಡಮನ್ ಕಾರ್ಯಕ್ಷೇತ್ರದ ಶ್ರೀ ದುರ್ಗಾ, ಸೌಭಾಗ್ಯ, ವ್ಯಾಘ್ರಶ್ವರಿ, ಅಮ್ಮ ಜ್ಞಾನವಿಕಾಸ ಕೇಂದ್ರ ವಾರ್ಷಿಕೋತ್ಸವ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಬೆಂಜನಪದವುನಲ್ಲಿ ಜರಗಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ಅಧ್ಯಕ್ಷ ರೋನಾಲ್ಡ್ ಡಿ ಸೋಜ ಕಾರ್ಯಕ್ರಮ ಉದ್ಘಾಟಿಸಿ ಮಹಿಳೆಯರಿಗೆ ಜ್ಞಾನ ವಿಕಾಸ ಕೇಂದ್ರ ಪ್ರತಿಭೆ ಯನ್ನು ವ್ಯೆಕ್ತ ಪಡಿಸಲು ಉತ್ತಮ ವೇದಿಕೆ ವಾಗಿದೆ. ಮಹಿಳೆಯರ ಸಮಸ್ಯೆಯನ್ನು ಅರಿತು ಕೊಂಡು ಮಾತೃಶ್ರೀ ಹೇಮಾವತಿ ಹೆಗ್ಡೆ ಯವರು ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲು ಜ್ಞಾನವಿಕಾಸ ಕೇಂದ್ರ ಪ್ರಾರಂಭ ಮಾಡಿದ್ದಾರೆ ಇದರ ಸದುಉಪಯೋಗ ಪಡೆದು ಕೊಳ್ಳಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಾರ್ಧನ ಬಾರಿಂಜೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬಂಟ್ವಾಳ ಎಸ್ ವಿ ಎಸ್ ಶಾಲಾ ಶಿಕ್ಷಕಿ ಪೂರ್ಣಿಮ ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ ಆಗಿರುವುದರಿಂದ ಮಹಿಳೆ ವಿದ್ಯಾವಂತಲಾದರೆ ಒಂದು ಕುಟುಂಬದ ಚಿತ್ರಣವೇ ಬದಲಾಗುತ್ತದೆ. ಮಕ್ಕಳು ಹೆಚ್ಚಾಗಿ ಅಮ್ಮಂದಿರರ ಒಡನಾಟಿನಲ್ಲಿ ಇರುವುದರಿಂದ ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಗಳನ್ನಾಗಿ ಮಾಡಿ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು