Friday, September 20, 2024
ಸುದ್ದಿ

ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಕಲಿಕೆಗೆ ಪ್ರಯತ್ನ ನಡೆಸಲಾಗುವುದು: ಎಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ನಾಡಿನ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಭಾಷೆ ಕಲಿಸುವ ನಿರ್ಧಾರವನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವ ಪ್ರಯತ್ನವನ್ನು ಸರ್ಕಾರ ನಡೆಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಿನ್ನೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 63 ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಾವೆಲ್ಲರೂ ಕನ್ನಡವೇ ಪ್ರಾಣ ಪದಕ ಎಂದು ಭಾವಿಸಿದ್ದೇವೆ. ಇದರ ಜತೆಗೆ ಮಕ್ಕಳ ಭವಿಷ್ಯವೂ ಮುಖ್ಯವಾಗುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳು ಕೀಳರಿಮೆ ಭಾವದಿಂದ ಹೊರಬಂದು ಎಲ್ಲರಂತೆ ಜೀವನ ಎದುರಿಸಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ.

ಜಾಹೀರಾತು

ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಭಾಷೆ ಕಲಿಸಲು ನಿರ್ಧರಿಸಲಾಗಿದೆ. ಆದರೆ, ಇಂಗ್ಲಿಷ್ ಕಲಿಸುವ ಆಶಯಕ್ಕೆ ಅಲ್ಲಲ್ಲಿ ಅಪಸ್ವರಗಳು ಬರುತ್ತಿವೆ. ಇಂಗ್ಲಿಷ್ ಕಲಿಕೆಯ ಉದ್ದೇಶ ವ್ಯಾವಹಾರಿಕ ದೃಷ್ಟಿಗೆ ಮಾತ್ರ ಸೀಮಿತ. ಇಂಗ್ಲಿಷ್ ಕಲಿಕೆ ಕನ್ನಡದ ಸಾರ್ವಭೌಮತ್ವದ ಮೇಲೆ ಸವಾರಿ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು.