Friday, January 24, 2025
ಉಡುಪಿಸುದ್ದಿ

ಉಡುಪಿ :ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯ ಶವ ಬಾವಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ : ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (17) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯೊಂದರಲ್ಲಿ ಪ್ರಥಮೇಶ್ ಮೃತದೇಹ ಪತ್ತೆಯಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು