Recent Posts

Monday, January 20, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವದ ದಾಖಲೆಗೆ `ಕಪ್ಪು ಚುಕ್ಕೆ ಮೇಲೆ ವೈಟ್ನರ್’ ಹಾಕಿ ಸಾಕ್ಷ್ಯ ನಾಶ! – ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ವಾಪಸ್ ಪಡೆದ ನಿವೇಶನ ಕ್ಕೆ ಬದಲಾಗಿ ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಸಿಎಂ ಪತ್ನಿಯೇ ಪತ್ರ ಬರೆದಿದ್ದರು ಎನ್ನಲಾಗಿತ್ತು. ಈಗ ಈ ದಾಖಲೆಗಳನ್ನೇ ತಿರುಚಿರುವ ಆರೋಪ ಬಂದಿದೆ.

ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ “ಕಪ್ಪು ಚುಕ್ಕೆ ಮೇಲೆ ವೈಟ್ನರ್‌” ಹಾಕಿ ಸಾಕ್ಷ್ಯ ನಾಶ!

ಜಾಹೀರಾತು
ಜಾಹೀರಾತು
ಜಾಹೀರಾತು

 ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ ಇವೆ. ಇದರ ನುಡವೆ ಬಿಡುಗಡೆ ಆಗುತ್ತಿರುವ ದಾಖಲೆಗಳನ್ನು ಕುತಂತ್ರದ ಮೂಲಕ ಮುಚ್ಚಿ ಹಾಕಲಾಗುತ್ತಿದೆ ಎಂದುಕಿಡಿಕಾರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿ ಅವರು ವಿಜಯನಗರದಲ್ಲೇ ಸೈಟು ಕೊಡಿ ಎಂದು ಪತ್ರ ಬರೆದಿದ್ದು ಬೆಳಕಿಗೆ ಬಂದಿದೆ. ಆದರೆ, ಸಿದ್ದರಾಮಯ್ಯ ಅವರು ಹಾಕಿದ ಭ್ರಷ್ಟಾಚಾರದ ಗಂಜಿಗೆ ಮುಡಾ ಅಧಿಕಾರಿಗಳು ಸಿಎಂ ಪತ್ನಿ ಬರೆದ ಪತ್ರದಲ್ಲಿನ ಸಾಲುಗಳಿಗೆ ವೈಟ್ನರ್‌ ಹಾಕಿ ಹಗರಣ ಮುಚ್ಚಿ ಹಾಕಲು ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿದೆ.

ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಾಮಮಾರ್ಗ ಹಿಡಿದಿರುವ ಸಿದ್ದರಾಮಯ್ಯನವರು ಕೊತ್ವಾಲ್‌ ಶಿಷ್ಯಂದಿರನ್ನು ರಾಜ್ಯದ ತುಂಬಾ ಬಿಟ್ಟು ದೊಂಬಿ ಎಬ್ಬಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕು. ಹಾಗಾದಾರೆ ಮಾತ್ರ ಭ್ರಷ್ಟಾಚಾರ ಹೊರ ಬರಲು ಸಾಧ್ಯ. ಇಲ್ಲದೆ ಹೋದರೆ ತಮಗೆ ತಾವೇ ಕ್ಲೀನ್‌ ಚಿಟ್‌ ಕೊಟ್ಟುಕೊಂಡು ಜಗತ್ತಿನ ಮುಂದೆ ನಾನು ಸತ್ಯಹರಿಶ್ಚಂದ್ರನ ತುಂಡು ಎಂದು ಲಜ್ಜೆಬಿಟ್ಟು ಬಿಂಬಿಸಿಕೊಂಡರೂ ಅಶ್ಚರಿ ಇಲ್ಲ ಎಂದು ಹೇಳಿದೆ.