Monday, January 20, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು – ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ – ಕಹಳೆ ನ್ಯೂಸ್

ಮಂಗಳೂರು,ಆ.22  : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ.

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್ ಗೆ ಹೋಗಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 5 ರಿಂದ ಆರು ಜನರ ತಂಡ ರಾತ್ರಿ 11 ರ ಸುಮಾರಿಗೆ ನಗರದ ವಾಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಿಂದ ಮನೆಯ ಗೋಡೆ ಹಾಗೂ ಕಿಟಕಿಯ ಫ್ರೇಮ್ ಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಮನೆಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ.