Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ ( 64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಬಿಸಿರೋಡಿನ ಕೃಷ್ಣಾ ಪ್ರೈಮ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವಿವಾಹಿತನಾಗಿರುವ ಇವರು ಅಪಾರ್ಟ್ ಮೆಂಟ್ ನಲ್ಲಿ ಒಬ್ಬರೇ ವಾಸವಾಗಿದ್ದರು. ಮರದ ವ್ಯಾಪಾರ ಮಾಡುತ್ತಿದ್ದ ಇವರು ಇತ್ತೀಚಿಗೆ ಆರೋಗ್ಯ ಸಮಸ್ಯೆಯಿಂದ ಸ್ವಲ್ಪಮಟ್ಟಿಗೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬಂಟ್ವಾಳ ನಗರ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು