ಕಾರ್ಕಳ : ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಬೆಳಗ್ಗೆ ಕಾರಿನಲ್ಲಿ ಕರೆದೊಯ್ದು ಬಳಿಕ ಸಂಜೆ ವಾಪಸ್ ಕರೆ ತಂದು ಮನೆಯ ಬಳಿ ಬಿಟ್ಟು ಹೋದ ಘಟನೆ ಕಾರ್ಕಳದಲ್ಲಿ ಆ.23ರಂದು ನಡೆದಿದೆ.
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಯ್ಯಪ್ಪನಗರ ಸಮೀಪದ ಯುವತಿಯ ಮನೆಯ ಬಳಿಯಿಂದ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಸಂಜೆ ವೇಳೆಗೆ ಮನೆ ಸಮೀಪ ಯುವತಿಯನ್ನು ಯುವಕ ಕಾರಿನಲ್ಲಿ ತಂದು ಬಿಟ್ಟ ಸಂದರ್ಭ ಯುವತಿ ಅಮಲಿನಲ್ಲಿ ತೂರಾಡುತ್ತಿರುವುದನ್ನು ನೋಡಿ ಸ್ಥಳೀಯರು ಯುವಕನನ್ನು ವಶಕ್ಕೆ ಪಡೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನು ವಿಚಾರಿಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ ಎಂದು ತಿಳಿದು ಬಂದಿದೆ. ಯುವತಿಯನ್ನು ಕರೆದೊಯ್ದ ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಎಂಬವನನ್ನು ಮತ್ತು ಆತನ ಸಹಚರ ಸುಬೇರ್ ಎಂಬಾತನನ್ನು ಕಾರ್ಕಳ ನಗರ ಠಾಣೆಯ ಪೆÇಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಈ ಘಟನೆಯಲ್ಲಿ ಇನ್ನೂ ಕೆಲವು ಯುವಕರು ಭಾಗಿಯಾಗಿದ್ದು, ಗ್ಯಾಂಗ್ ರೇಪ್ ನಡೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೆÇಲೀಸರು ಇನ್ನುಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೆÇಲೀಸ್ ಠಾಣೆಯ ಬಳಿ ಜಮಾಯಿಸಿದ್ದು ಉಳಿದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಆರೋಪಿಗಳ ಪೈಕಿ ಓರ್ವನು ಸಂತ್ರಸ್ತ ಯುವತಿಗೆ ಪರಿಚಿತನಾಗಿದ್ದಾನೆ. ಈತನೇ ಈಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ಮತ್ತಿಬ್ಬರನ್ನು ಕರೆಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಆರೋಪಿ ಅಲ್ತಾಫ್ ನನ್ನು ಮತ್ತು ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.