Tuesday, April 8, 2025
ಕಾಪು

ದಿ.ಕೆ ಲೀಲಾಧರ ಶೆಟ್ಟಿ ಸರ್ಕಲ್ ಸೇರಿದಂತೆ ಮಜೂರು ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2024-25 ನೇ ಸಾಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ದಿ. ಕೆ ಲೀಲಾಧರ ಶೆಟ್ಟಿ ಅವರ ಸರ್ಕಲ್ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ಪೋಲಿಸ್ ಉಪ ನಿರೀಕ್ಷಕರಾದ ಖಾದರ್, ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಲಾಸಿನಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರು, ಮಜೂರು ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ