Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಲಿಟ್ಲ್ ಫ್ಲವರ್ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಕಹಳೆ ನ್ಯೂಸ್

ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು,ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಪ್ರತಿಭಾ ಶೋಧ ” ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್ ಆರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕರಾದ ವಿಷ್ಣು ಪ್ರಸಾದ್, ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ನಾಗೇಶ್ ಪಾಟಾಳಿ,ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್ ಹಾಗೂ ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಸತೀಶ್ ಎಸ್ ಆರ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪುತ್ತೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಶಿಕಲಾ ಪ್ರಸ್ತಾಪಿಸಿ, ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ. ವೆನಿಶಾ ವಂದಿಸಿದರು. ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು