Sunday, January 19, 2025
ಕುಂದಾಪುರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು “ಕಲಿಯುಗದ ಕಲ್ಪವೃಕ್ಷ” – ಶಾಸಕ ಕಿರಣ್ ಕೊಡ್ಗಿ- ಕಹಳೆ ನ್ಯೂಸ್

ಕುಂದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾತೃ ವಾತ್ಸಲ್ಯ ನೀಡುವ ಸಂಸ್ಥೆಯಾಗಿದೆ ಶಿಕ್ಷಣಕ್ಕೆ ಪೂರಕವಾಗಿ ಜ್ಞಾನದೀಪ ಶಿಕ್ಷಕರ ಒದಗಣೆ, ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಸರಕಾರಿ ಶಾಲೆಗಳಿಗೆ ಪೀಠೋಪಕರಣಗಳ ಜೊತೆಗೆ ಶಿಕ್ಷಣ ಆರೋಗ್ಯ ಮಹಿಳಾ ಸಬಲೀಕರಣ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನೀಡುತ್ತಿರುವ ಸಂಸ್ಥೆಯನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡುತ್ತ “ಕಲಿಯುಗದ ಕಲ್ಪವೃಕ್ಷ”ವೆಂದರೆ ತಪ್ಪಾಗಲಾರದು ಎಂದು ಅವರು ಕೋಟೇಶ್ವರ ವಿಶ್ವಕರ್ಮ ಸಭಾ ಭವನದಲ್ಲಿ ಕುಂದಾಪುರ ತಾಲೂಕ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಸೌಲಭ್ಯಗಳನ್ನು ವಿತರಿಸಿ ಮಾತನಾಡುತಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಮುತ್ಸದ್ದಿ ಮಾಜಿ ಶಾಸಕರಾದ ಅಪ್ಪಣ್ಣ ಹೆಗ್ಡೆಯವರು ಮಾತನಾಡುತ್ತಾ ಧರ್ಮಸ್ಥಳ ಸಂಸ್ಥೆಯ ಕಾರ್ಯಕ್ರಮಗಳು ಸರ್ವರಿಗೂ ಸಮಬಾಳು ತತ್ವದಡಿಯಲ್ಲಿ ನಡೆಯುವ ಕಾರ್ಯಕ್ರಮವಾಗಿದೆ. ಒಂದು ಧಾರ್ಮಿಕ ಕ್ಷೇತ್ರದ ಮೂಲಕ ಮನುಷ್ಯನ ಜೀವನಕ್ಕೆ ಅನುಕೂಲವಾಗುವ ವಿವಿಧ ಕಾರ್ಯಕ್ರಮಗಳನ್ನು ಅನುಷ್ಟಾನಿಸಲಾಗುತ್ತಿದೆ.ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಜನ ಸಮುದಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಟ್ಟಾಡಿ ನವೀನ್ ಚಂದ್ರ ಶೆಟ್ಟಿ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ,ವಕೀಲ ಉಮೇಶ್ ಶೆಟ್ಟಿ ಶಾನ್ಕಟ್ಟು, LIC ಪ್ರಬಂಧಕ ದಿನೇಶ್ ಪ್ರಭು, ಭಜನಾ ಮಂಡಳಿ ಅಧ್ಯಕ್ಷ ರಾಜೇಂದ್ರ ಕುಮಾರ ಬಸ್ರೂರು ,ರಥಶಿಲ್ಪಿ ರಾಜಗೋಪಾಲ್ ಆಚಾರ್ಯ ಉದ್ಯಮಿ ಸುಬ್ರಮಣ್ಯ ಶೆಟ್ಟಿ ಕೋಟೇಶ್ವರ ,SKDRDP ನಿರ್ದೇಶಕ ನಾಗರಾಜ್ ಶೆಟ್ಟಿ ,ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ ಕೆರೆಕಟ್ಟೆ ಮತ್ತು ಸುಬ್ರಮಣ್ಯ ಆಚಾರ್ ಉಪಸ್ಥಿತರಿದ್ದರು.

ಸದ್ರಿ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯರು, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರು, ಭಜನಾ ಪರಿಷತ್ತಿನ ಸಂಯೋಜಕರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿಗಳು,ಸುಜ್ಞಾನ ನಿಧಿ ಶಿಷ್ಯವೇತನ ಪಡೆದುಕೊಳ್ಳುವ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಯೋಜನಾಧಿಕಾರಿ ನಾರಾಯಣ ಪಾಲನ್ ಸ್ವಾಗತಿಸಿ ಮೇಲ್ವಿಚಾರಕಿ ವೇದಾವತಿ ವಂದಿಸಿದರು. ಯೋಜನಾಧಿಕಾರಿ ಪಾರ್ವತಿ ಕಾರ್ಯಕ್ರಮ ನಿರೂಪಿಸಿದರು.